Posted on 03-04-2025 |
Share: Facebook | X | Whatsapp | Instagram
ಕಾಗಿನೆಲೆ ನಿರಂಜಾನಂದಪುರಿ ಮಹಾಸ್ವಾಮಿಗಳಿಗೆ ಗೌರವ ಡಾಕ್ಟರೇಟ್
ಶಿಕಾರಿಪುರ : ದಾವಣಗೆರೆ ವಿಶ್ವವಿದ್ಯಾನಿಲಯದ 12ನೇ ಘಟಿಕೋತ್ಸವದಲ್ಲಿ ಕಾಗಿನೆಲೆ ಕನಕ ಗುರು ಪೀಠದ ಜಗದ್ಗುರು ಶ್ರೀ ಶ್ರೀಶ್ರೀ ನಿರಂಜಾನಂದಪುರಿ ಮಹಾಸ್ವಾಮಿಗಳ ಸಮಾಜ ಸೇವೆಯನ್ನು ಗುರುತಿಸಿ ರಾಜ್ಯಪಾಲ ತಾವರ್ ಚಂದ್ ಗೇಹಲೋ ಟ್ ರವರು ಗೌರವ ಡಾಕ್ಟರೇಟ್ ನೀಡಿ ಗೌರವಿಸಿದರು. ಸಂದರ್ಭದಲ್ಲಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ರಘು ಹೆಚ್ ಎಸ್, ಮಾಜಿ ಅಧ್ಯಕ್ಷರಾದ ಸುದರ್ಶನ್ ಶಿವರಂಜಿನಿ, ಕನಕ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಮಾಜಿ ಅಧ್ಯಕ್ಷರಾದ ತಿಮ್ಮಲಾಪುರ ದೊಡ್ಡಪ್ಪ, ತಾಲೂಕು ಕಾರ್ಯ ನಿರತ ಪತ್ರಕರ್ತ ಸಂಘದ ಅಧ್ಯಕ್ಷರಾದ ಬಿ ಎಲ್ ರಾಜು, ಶಿವಮೊಗ್ಗ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಧಾನ ಕಾರ್ಯದರ್ಶಿ ಎಂ ಎಂ ಸ್ವಾಮಿ, ಮುಖಂಡರಾದ ಇಕ್ಕೇರಿ ರಮೇಶ್, ಮುಂತಾದವರು ಉಪಸ್ಥಿತರಿದ್ದು ಅಭಿನಂದಿಸಿದರು ಅಭಿನಂದಿಸಿದರು.