Posted on 14-08-2025 |
Share: Facebook | X | Whatsapp | Instagram
ಕುರಿಗಾಯಿಗಳ ಹಿತರಕ್ಷಣಾ ಕಾಯ್ದೆಯನ್ನು ಜಾರಿಗೊಳಿಸಲು ಆ೧೯ರಂದು ಬೆಂಗಳೂರಿನಲ್ಲಿ ಕುರಿಗಾಯಿಗಳ ಬೃಹತ್ ಪ್ರತಿಭಟನೆ- ಡಾ. ಪ್ರಶಾಂತ್ ಡಿ.ಟಿ.
ಶಿವಮೊಗ್ಗ : ರಾಜ್ಯದಲ್ಲಿರುವ ಕುರುಗಾರರ ಮೇಲೆ ಆಗುತ್ತಿರುವ ದೌರ್ಜನ್ಯಗಳ ತಡೆಗಾಗಿ ಸಾಂಪ್ರದಾಯಿಕ ಕುರಿಗಾಯಿಗಳ ಹಿತರಕ್ಷಣಾ ಕಾಯ್ದೆಯನ್ನು ರೂಪಿಸಿ ಜಾರಿಗೆ ತರಬೇಕು ಎಂದು ಒತ್ತಾಯಿಸುವ ಸಲುವಾಗಿ ಆಗಸ್ಟ್ ೧೯ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ರಾಜ್ಯದ ಎಲ್ಲಾ ಕುರಿಗಾಯಿಗಳ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ರಾಜ್ಯ ಹಾಲುಮತ ಮಹಾಸಭಾದ ರಾಜ್ಯ ಉಪಾಧ್ಯಕ್ಷರಾದ ಡಾ. ಪ್ರಶಾಂತ್ ಡಿ.ವಿ. ತಿಳಿಸಿದ್ದಾರೆ.
ರಾಜ್ಯದಲ್ಲಿರುವ ಕುರಿಗಾರ ಮೇಲೆ ನಿರಂತವಾಗಿ ನಡೆಯುತ್ತಿರುವ ಹಲ್ಲೆ, ಜೀವ ಬೇದರಿಕೆ, ಕೊಲೆ, ಅತ್ಯಾಚಾರ, ಕುರಿ ಕಳ್ಳತನ, ಅರಣ್ಯಾಧಿಕಾರಿಗಳ ಲಂಚದ ಬೇಡಿಕೆ ಇನ್ನಿತರ ದೌರ್ಜನ್ಯ ಮತ್ತು ಶೋಷಣೆ ಅಧಿಕ ಪ್ರಮಾಣದಲ್ಲಿ ನಡೆಯುತ್ತಿವೆ. ಸರ್ಕಾರವು ಎಲ್ಲ ವರ್ಗದ ಮಹಿಳೆಯರ ಪರ, ಮಕ್ಕಳ ಪರ, ಶೋಷಿತ ಸಮುದಾಗಳ ಪರ ಹಾಗೂ ವಿವಿಧ ವೃತ್ತಿಪರರ ಹಿತರಕ್ಷಣೆಗೆ ವಿವಿಧ ವಿಶೇಷ ಕಾಯ್ದೆಗಳನ್ನು ಜಾರಿ ಮಾಡಿ ಅವರ ರಕ್ಷಣೆ ಮಾಡಿದ್ದು ಅದೇ ರೀತಿ ಕುರಿಗಾಹಿಕೆಯಿಂದ ಜೀವನ ನಡೆಸುತ್ತಿರುವ ಕುರಿಗಾರ ಮತ್ತು ಆತನ ಪರಿವಾರದ ಮೇಲೆ ಆಗುತ್ತಿರುವ ನಿರಂತರ ದೌರ್ಜನ್ಯಗಳಂತಹ ದುಷ್ಕೃತ್ಯಗಳ ಕಡಿವಾಣಕ್ಕಾಗಿ ಸಾಂಪ್ರದಾಯಿಕ ಕುರಿಗಾಹಿಗಳ ಹಿತರಕ್ಷಣಾ ಕಾಯ್ದೆಯನ್ನು ರೂಪಿಸಿ ಜಾರಿಗೆ ತರಬೇಕೆಂದು ರಾಜ್ಯ ಘನ ಸರ್ಕಾರವನ್ನು ಆಗ್ರಹಿಸುತ್ತೇವೆ.
ಸರ್ಕಾರವು ೨೦೨೪-೨೫ ನೇ ಸಾಲಿನ ಬಜೆಟ್‌ನಲ್ಲಿ ಕುರಿಗಾಹಿಗಳಿಗೆ ಸಂಬಂಧಿಸಿದಂತೆ ದೌರ್ಜನ್ಯ ತಡೆ ಕಾಯ್ದೆ ರೂಪಿಸಲು ಪ್ರಸ್ಥಾಪಿಸಿದ್ದು ಈ ಮಸೂದೆಯನ್ನು ಸರ್ಕಾರವು ಆಗಸ್ಟ್ ೧೧ ರಿಂದ ನಡೆಯಲಿರುವ ಅಧಿವೇಶನದಲ್ಲಿ ಕಾಯ್ದೆಯಾಗಿ ಜಾರಿಗೊಳಿಸಬೇಕೆಂದು ಆಗ್ರಹಿಸಿ, \"ಕುರಿಗಾರರ ನಡಿಗೆ ವಿಧಾನಸೌಧ ಕಡೆಗೆ\" ಎಂಬ ಘೋಷಣಾ ವಾಕ್ಯದೊಂದಿಗೆ ಬೆಂಗಳೂರಿನ ಸ್ವಾತಂತ್ರö್ಯ ಉದ್ಯಾನವನದಲ್ಲಿ ಆಗಸ್ಟ್ ೧೯ ರಂದು ರಾಜ್ಯದ ಎಲ್ಲಾ ಭಾಗಗಳ ಕುರಿಗಾಹಿಗಳು ಸೇರಿ ಸರ್ಕಾರವನ್ನು ಒತ್ತಾಯಿಸಲು ಈ ಬೃಹತ್ ಹೋರಾಟವನ್ನು ಹಮ್ಮಿಕೊಳ್ಳಲಾಗಿದೆ. ಈ ಹೋರಾಟದಲ್ಲಿ ರಾಜ್ಯದ ಎಲ್ಲಾ ಕುರಿಗಾಹಿಗಳು, ಶೋಷಿತ ಸಮುದಾಯಗಳ ಮುಖಂಡರು, ರೈತ ಮುಖಂಡರು, ಪ್ರಗತಿಪರ ಚಿಂತಕರು, ಭಾಗವಹಿಸುವುದರ ಮೂಲಕ ಬೆಂಬಲಿಸಬೇಕೆAದು ಕೋರುತ್ತೇವೆ.