ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಶಿಕಾರಿಪುರ ಮಹಿಳಾ ಘಟಕದ ಅಧ್ಯಕ್ಷೆ ಪುಷ್ಪಾ ಶಿವಕುಮಾರ್ ಅವರ ನೇತೃತ್ವದಲ್ಲಿ ಶಿಕಾರಿಪುರದ ಬಿಜೆಪಿ, ಜೆಡಿಎಸ್ ಪಕ್ಷದ ಹಲವು ನಾಯಕರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ

Shikaripura Local

Posted on 01-09-2025 |

Share: Facebook | X | Whatsapp | Instagram


ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಶಿಕಾರಿಪುರ ಮಹಿಳಾ ಘಟಕದ ಅಧ್ಯಕ್ಷೆ ಪುಷ್ಪಾ ಶಿವಕುಮಾರ್ ಅವರ ನೇತೃತ್ವದಲ್ಲಿ ಶಿಕಾರಿಪುರದ ಬಿಜೆಪಿ, ಜೆಡಿಎಸ್ ಪಕ್ಷದ ಹಲವು ನಾಯಕರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ

ಶಿವಮೊಗ್ಗ: ಶಿಕಾರಿಪುರ ರಾಜಕಾರಣದಲ್ಲಿ ಮಹತ್ತರ ಬೆಳವಣಿಗೆಯಾಗುತ್ತಿದ್ದು, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಶಿಕಾರಿಪುರ ಮಹಿಳಾ ಘಟಕದ ಅಧ್ಯಕ್ಷೆ ಪುಷ್ಪಾ ಶಿವಕುಮಾರ್ ಅವರ ನೇತೃತ್ವದಲ್ಲಿ ಬಿಜೆಪಿ, ಜೆಡಿಎಸ್ ಪಕ್ಷದ ಹಲವು ನಾಯಕರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಳ್ಳಲಿದ್ದಾರೆ. 
ಇದಕ್ಕೆ ಸಾಕ್ಷಿ ಎಂಬಂತೆ ಭಾನುವಾರ ನಗರದ ಸಾಗರ ರಸ್ತೆಯಲ್ಲಿರುವ ಹೋಟೆಲ್ ಹರ್ಷ ಫನ್ ಸಭಾಂಗಣದಲ್ಲಿ ಪುಷ್ಪಾ ಶಿವಕುಮಾರ್ ಅಧ್ಯಕ್ಷತೆಯಲ್ಲಿ ಪಕ್ಷಕ್ಕೆ ಸೇರ್ಪಡೆಗೊಳ್ಳುವ ಬಗ್ಗೆ ಸಮಾಲೋಚನಾ ಸಭೆ ನಡೆಯಿತು. ಈ ಸಭೆಯಲ್ಲಿ ಶಿಕಾರಿಪುರ, ಶಿರಾಳಕೊಪ್ಪ ಮತ್ತು ಸುತ್ತಮುತ್ತಲ ಗ್ರಾಮದ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಮುಖಂಡರು ಹಾಜರಿದ್ದು, ಪಕ್ಷದ ಸಿದ್ಧಾಂತಕ್ಕೆ ಒಳಪಟ್ಟು ಪಕ್ಷವನ್ನು ಸೇರಿ ಎಂದು ಆಹ್ವಾನಿಸಿದರು. 
ಮುಖ್ಯವಾಗಿ ಉದ್ಯಮಿ ಎನ್.ವಿ. ಈರೇಶ್ ಅವರು ಈ ಹಿಂದೆ ಬಿಜೆಪಿಯಲ್ಲಿ ಗುರುತಿಸಿಕೊಂಡಿದ್ದು, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ನಿರ್ದೇಶಕರು,  ಇವರು ತಮ್ಮ ಬೆಂಬಲಿಗರೊಂದಿಗೆ ಕಾಂಗ್ರೆಸ್ ಪಕ್ಷವನ್ನು ಸೇರುವ ಇಚ್ಛೆ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪುಷ್ಪಾ ಶಿವಕುಮಾರ್, ಶಿಕಾರಿಪುರದಲ್ಲಿ ಮತ್ತೆ ಕಾಂಗ್ರೆಸ್ ವಿಜೃಂಭಿಸಬೇಕು. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸ್ವಲ್ಪದರಲ್ಲಿ ನಾವು ಸೋಲು ಕಂಡಿದ್ದೇವೆ. ಮುಂದೆ ಹಾಗೆ ಆಗಬಾರದು. ಹಾಗಾಗಿ ಪಕ್ಷದ ಹಿರಿಯರ ಮತ್ತು ರಾಜ್ಯ ನಾಯಕರ ಮಾರ್ಗದರ್ಶನದಲ್ಲಿ ಈಗಿನಿಂದಲೇ ಪಕ್ಷವನ್ನು ಸಂಘಟಿಸಬೇಕಾಗಿದೆ. ಈ ಹಿನ್ನೆಲೆಯಲ್ಲಿ ಈರೇಶ್ ಅವರನ್ನು ಪಕ್ಷಕ್ಕೆ ಬರಮಾಡಿಕೊಳ್ಳಲಾಗುವುದು. ಇದರಿಂದ ಕಾಂಗ್ರೆಸ್ ಪಕ್ಷ ಮತ್ತಷ್ಟು ಬಲವರ್ಧನೆ ಗೊಳ್ಳುತ್ತದೆ. ಈಗಾಗಲೇ ಈ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಜಿಲ್ಲಾಧ್ಯಕ್ಷರ ಜೊತೆಗೆ ಮಾತನಾಡಿದ್ದೇವೆ. ಶೀಘ್ರವೇ ಅವರ ಸಮ್ಮುಖದಲ್ಲೇ ಇವರ ಜೊತೆಗೆ ಹಲವರು ಕಾಂಗ್ರೆಸ್ ಪಕ್ಷಕ್ಕೆ ಸೇರಲಿದ್ದಾರೆ ಎಂದರು.
ಉದ್ಯಮಿ ಈರೇಶ್ ಮಾತನಾಡಿ, ಕಾಂಗ್ರೆಸ್ ಪಕ್ಷದ ಸಿದ್ಧಾಂತಗಳನ್ನು ಒಪ್ಪಿಕೊಂಡೇ ನನ್ನ ಬೆಂಬಲಿಗರೊಂದಿಗೆ ಪಕ್ಷ ಸೇರುತ್ತೇನೆ. ಅಧಿಕೃತವಾಗಿ ಜಿಲ್ಲಾ ಉಸ್ತುವಾರಿ ಸಚಿವ ಸಮ್ಮುಖದಲ್ಲಿ ಶೀಘ್ರವೇ ಪಕ್ಷಕ್ಕೆ ಸೇರ್ಪಡೆಗೊಳ್ಳುವೆ ಎಂದರು.
ಗುತ್ತಿಗೆದಾರ ಹೆಚ್ ಎಂ  ಶಿವಕುಮಾರ್  ಸಹ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಗೊಳ್ಳಲಿದ್ದಾರೆ.
ಈ ಸಂದರ್ಭದಲ್ಲಿ ಜಿಲ್ಲೆಯ ಹಲವು ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು, ಮತ್ತು ಪಕ್ಷಕ್ಕೆ ಸೇರ್ಪಡೆಗೊಳ್ಳುವ ಹಲವರು ಹಾಜರಿದ್ದರು.

Search