ನ್ಯಾಮತಿ ತಾಲೂಕಿನಲ್ಲಿ ವಿದ್ಯಾರ್ಥಿ ನಿಲಯಗಳನ್ನು ಪ್ರಾರಂಭಿಸಲು ವಿದ್ಯಾರ್ಥಿ ಸಂಘಟನೆ ಆಗ್ರಹ

Politics Local

Posted on 27-01-2025 |

Share: Facebook | X | Whatsapp | Instagram


ನ್ಯಾಮತಿ ತಾಲೂಕಿನಲ್ಲಿ  ವಿದ್ಯಾರ್ಥಿ ನಿಲಯಗಳನ್ನು ಪ್ರಾರಂಭಿಸಲು ವಿದ್ಯಾರ್ಥಿ ಸಂಘಟನೆ ಆಗ್ರಹ

*ನ್ಯಾಮತಿ ತಾಲೂಕಿನಲ್ಲಿ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ವಿದ್ಯಾರ್ಥಿ ನಿಲಯಗಳನ್ನು ಪ್ರಾರಂಭಿಸಿ; ಬಂಜಾರ ಯುವಕರ ಮತ್ತು ವಿದ್ಯಾರ್ಥಿ ಸಂಘದ ಆಗ್ರಹ* 

2017ರ ರಾಜ್ಯ ಸರ್ಕಾರದ ಬಜೆಟ್ ನಲ್ಲಿ ದಾವಣಗೆರೆ ಜಿಲ್ಲೆಯ ನ್ಯಾಮತಿಯನ್ನು ನೂತನ ತಾಲೂಕು ಎಂದು ಘೋಷಿಸಲಾಗಿತ್ತು. 

ನೂತನ ತಾಲೂಕು ಘೋಷಣೆಯಾಗಿ ಎಂಟು ವರ್ಷ ಕಳೆದರೂ ಸ್ಥಳೀಯ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಸಮಾಜ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ನಿಲಯಗಳು ಪ್ರಾರಂಭವಾಗಿಲ್ಲ. 

ತಾಲೂಕಿನಲ್ಲಿ ಹೆಚ್ಚಿನ ಸಂಖ್ಯೆಯ ಪರಿಶಿಷ್ಟ ಜಾತಿಯ ಬಂಜಾರ, ಆದಿ ಕರ್ನಾಟಕ , ಆದಿ ದ್ರಾವಿಡ, ಬೋವಿ, ಕೊರಚ-ಕೊರಮ ಸಮುದಾಯದ ವಿದ್ಯಾರ್ಥಿಗಳಿದ್ದು  ಹಾಸ್ಟೆಲ್ ಸೌಲಭ್ಯವಿಲ್ಲದೆ ಪರದಾಡುವಂತಾಗಿದೆ. 

 ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ರಾಜ್ಯ ಸರ್ಕಾರದ ಮಾರ್ಚ್ ತಿಂಗಳ ಬಜೆಟ್ ನಲ್ಲಿ ನ್ಯಾಮತಿ ಪಟ್ಟಣದಲ್ಲಿ ಬಾಲಕ ಹಾಗೂ ಬಾಲಕಿಯರ ಮೆಟ್ರಿಕ್ ಪೂರ್ವ & ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳನ್ನು ಹಾಗೂ ಸವಳಂಗ ಗ್ರಾಮದಲ್ಲಿ ಬಾಲಕ ಹಾಗೂ ಬಾಲಕಿಯರ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಗಳನ್ನು ಪ್ರಾರಂಭಿಸುವಂತೆ ದಾವಣಗೆರೆಯ ಮಾನ್ಯ ಜಿಲ್ಲಾಧಿಕಾರಿಗಳಿಗೆ ಹಾಗೂ ಹೊನ್ನಾಳಿ ನ್ಯಾಮತಿ ಅವಳಿ ತಾಲೂಕಿನ ಶಾಸಕರಾದ ಮಾನ್ಯ ಶ್ರೀ ಡಿ.ಜಿ ಶಾಂತನಗೌಡ ಅವರ ಮೂಲಕ \"ಕರ್ನಾಟಕ ರಾಜ್ಯ ಬಂಜಾರ ಯುವಕರ ಮತ್ತು ವಿದ್ಯಾರ್ಥಿ ಸಂಘದ\" ವತಿಯಿಂದ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.

ಸಂಘದ ರಾಜ್ಯಾಧ್ಯಕ್ಷರಾದ ಗಿರೀಶ್ ಡಿ.ಆರ್, ನ್ಯಾಮತಿ ತಾಲೂಕು ಅಧ್ಯಕ್ಷರಾದ ಮಂಜುನಾಯ್ಕ್ ಸಾಲಬಾಳು, ಸಂಘದ ಪದಾಧಿಕಾರಿಗಳಾದ ರಂಗನಾಥ್, ಕಿರಣ್ ನಾಯ್ಕ್, ಮಾರುತಿ, ನಾಗರಾಜ್ ನಾಯ್ಕ್ ಸೇರಿದಂತೆ ಸಂಘದ ಸದಸ್ಯರು ಉಪಸ್ಥಿತರಿದ್ದರು.

Search